ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಯ | ಬಿಜೆಪಿಯಿಂದ ಮನೆಮನೆಯಲ್ಲಿ ಆಣೆ-ಪ್ರಮಾಣ: ಪದ್ಮರಾಜ್ ಆರೋಪ

Published 20 ಏಪ್ರಿಲ್ 2024, 4:54 IST
Last Updated 20 ಏಪ್ರಿಲ್ 2024, 4:54 IST
ಅಕ್ಷರ ಗಾತ್ರ

ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗಿದ್ದು ಮನೆಮನೆಗಳಿಗೆ ತೆರಳಿ ಆಣೆ-ಪ್ರಮಾಣ ಮಾಡಿಸುತ್ತಿದ್ದಾರೆ. ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೆ ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಲಹೆ ನೀಡಿದರು.

ಸಂಪಾಜೆಯಿಂದ ಕಲ್ಲುಗುಂಡಿವರೆಗೆ ನಡೆದ ರೋಡ್ ಶೋ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸಂಸದರಾಗಿದ್ದ 33 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿಲ್ಲ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ ಕೆಲಸಗಳು ಜಿಲ್ಲೆಯನ್ನು ಮಾದರಿಯಾಗಿಸಿದ್ದವು. ಮುಂದೆಯೂ ಜಿಲ್ಲೆ ಮಾದರಿಯಾಗಲಿದೆ ಎಂದರು.

ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ನಡೆಯಬೇಕಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದು ಮುಂದೆಯೂ ಹಾಗೆಯೇ ಮಾಡಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.

ಮಹಿಳಾ ಕಾಂಗ್ರೆಸ್ ರಾಜ್ಯ ಘಕಟದ ಅಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ಕ್ಷೇತ್ರದಲ್ಲಿ ಪಕ್ಷದಿಂದ ಉತ್ತಮ ಅಭ್ಯರ್ಥಿ ಇದ್ದು ಅವರು ಗೆಲ್ಲಬೇಕು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಮುಖಂಡರಾದ ಜಿ. ಕೃಷ್ಣಪ್ಪ, ಟಿ.ಎಂ.ಶಹೀದ್, ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ಜಿ.ಕೆ.ಹಮೀದ್, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ ಮತ್ತಿತರರು ಇದ್ದರು.

ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಪದ್ಮರಾಜ್ ಆರ್ ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT