ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನಾ ದಿನ; ಹಿರಿಯರ ತ್ಯಾಗದಿಂದ ಪಕ್ಷ ಬಲಿಷ್ಠ

ಪ್ರಧಾನಿ ಭಾಷಣದ ನೇರ ವೀಕ್ಷಣೆ
Last Updated 6 ಏಪ್ರಿಲ್ 2022, 11:16 IST
ಅಕ್ಷರ ಗಾತ್ರ

ಮಂಗಳೂರು: ಹಿರಿಯ ನಾಯಕರ ಪರಿಶ್ರಮ, ತ್ಯಾಗದಿಂದ ಬಿಜೆಪಿ ದೇಶದಾದ್ಯಂತ ಬಲಿಷ್ಠವಾಗಿ ಬೆಳೆದು ನಿಂತಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ಕೇಂದ್ರ ಸರ್ಕಾರದವರೆಗೆ ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದರು.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬುಧವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಪ್ರೇಮ ಹಾಗೂ ಸಿದ್ಧಾಂತದ ತಳಹದಿಯಲ್ಲಿ ಸ್ಥಾಪನೆಯಾದ ಜನಸಂಘದ ಆದರ್ಶದ ಹಾದಿಯಲ್ಲಿ
ಬಿಜೆಪಿ ಸಾಗಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಸಾರಥ್ಯದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿರುವುದು ಹೆಮ್ಮೆಯ ಸಂಗತಿ. ಬಲಿಷ್ಠವಾಗಿರುವ ಪಕ್ಷ ಸಂಘಟನೆಯನ್ನು ಇನ್ನಷ್ಟು ವಿಸ್ತಾರಗೊಳಿಸುವ ಮಹತ್ತರ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಮಾಜಿ ಎಂಎಲ್‍ಸಿ ಮೋನಪ್ಪ ಭಂಡಾರಿ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,
ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಪಕ್ಷದ ಮುಖಂಡರಾದ ಉದಯಕುಮಾರ್ ಶೆಟ್ಟಿ, ರಾಜೇಶ್ ಕಾವೇರಿ, ರಾಧಾಕೃಷ್ಣ ರೈ ಬೂಡಿಯಾರ್, ಕಸ್ತೂರಿ ಪಂಜ, ಈಶ್ವರ್ ಕಟೀಲ್, ರಾಮದಾಸ್ ಬಂಟ್ವಾಳ, ರೂಪಾ ಬಂಗೇರ, ಮಹಾನಗರ ಪಾಲಿಕೆ ಸದಸ್ಯರಾದ ದಿವಾಕರ ಪಾಂಡೇಶ್ವರ, ಜಗದೀಶ್ ಶೆಟ್ಟಿ ಬೋಳೂರು, ವೀಣಾ ಮಂಗಳ, ಸಂದೀಪ್ ಗರೋಡಿ, ಮನೋಹರ ಶೆಟ್ಟಿ ಕದ್ರಿ, ರೂಪಶ್ರೀ ಇದ್ದರು. ಜಿಲ್ಲಾ ಕಾರ್ಯದರ್ಶಿ ಜಯಶ್ರೀ ಕರ್ಕೇರ ವಂದಿಸಿದರು.

ಕಾಲ್ನಡಿಗೆ ಜಾಥಾ: ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜಿಲ್ಲಾ ಘಟಕ ಮತ್ತು ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ರಥಬೀದಿಯಿಂದ ಜಿಎಚ್‍ಎಸ್ ರಸ್ತೆ, ಹಂಪನಕಟ್ಟೆ , ಕೆ.ಎಸ್.ರಾವ್ ರಸ್ತೆ ಮೂಲಕ ನಗರದ
ಕೊಡಿಯಾಲ್‍ಬೈಲ್‍ನ ಜಿಲ್ಲಾ ಘಟಕದ ಕಚೇರಿಯವರೆಗೆ ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರವನ್ನು ಎಲ್‍ಇಡಿ ಪರದೆ ಮೂಲಕ ಕಾರ್ಯಕರ್ತರು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT