ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ: ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ

Last Updated 28 ನವೆಂಬರ್ 2020, 8:30 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ಬಿ.ಸಿ ರೋಡಿನಲ್ಲಿ ಶನಿವಾರ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಚಾಲನೆ ನೀಡಿದರು.ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ಹಮ್ಮಿಕೊಂಡಿದ್ದು, ಸಮಾವೇಶಕ್ಕೂ ಮೊದಲು ಮೆರವಣಿಗೆ ನಡೆಯಿತು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ರಾಜೇಶ್ ನಾಯ್ಕ್, ಸಂಸದರಾದ ಶೋಭಾ ಕರಂದ್ಲಾಜೆ, ಮುನಿಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಇದ್ದರು.

ಇದಕ್ಕೂ ಮೊದಲು ಮಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ’ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಸಾಧಿಸಿರುವ ಬಿಜೆಪಿಯು ಗ್ರಾಮೀಣ ಮಟ್ಟದಲ್ಲೂ ಯಶಸ್ಸು ಸಾಧಿಸಲಿದೆ’ ಎಂದು ಹೇಳಿದರು.

‘ಕಾಂಗ್ರೆಸ್‌ ಇದೀಗ ರಾಜಕಾರಣದಲ್ಲಿ ಅಪ್ರಸ್ತುತವಾಗಿದೆ. ನಾಯಕತ್ವದ ಕೊರತೆ, ಜನವಿರೋಧಿ ನೀತಿಗಳು, ರಾಷ್ಟ್ರದ ಹಿತಾಸಕ್ತಿ ಬಗ್ಗೆ ರಾಜಿ... ಇತ್ಯಾದಿ ಕಾರಣಗಳಿಂದ ಜನಮಾನಸದಿಂದ ಮರೆಯಾಗಿ ಬಿಡುತ್ತಿದೆ ಎಂದರು.

ಲೋಕಮಾನ್ಯ ಬಾಲಗಂಗಾದರ ತಿಲಕರು ಹಾಗೂ ಮಹಾತ್ಮ ಗಾಂಧಿ ಹೇಳಿದ್ದ ಸ್ವರಾಜ್ಯವನ್ನು ಕಾಂಗ್ರೆಸ್, ಹೇಳಿಕೆಗೆ ಮಾತ್ರ ಸೀಮಿತಗೊಳಿಸಿದ್ದರೆ, ಬಿಜೆಪಿ ಜಾರಿ ಮಾಡುತ್ತಿದೆ. ಬಿಜೆಪಿ ಮತ್ತು ನಾಗರಿಕರ ಚಿಂತನೆ ಒಂದೇ ಆಗಿದೆ. ಬಿಜೆಪಿ ಉದ್ದೇಶಗಳು ಜನರ ಜೀವನದ ಭಾಗವಾಗಿದೆ ಎಂದರು.

‘ಭಾರತವು ಅವಲಂಬನೆ ಮುಕ್ತವಾಗಿ ಆತ್ಮನಿರ್ಭರತೆಯತ್ತ ಹೆಜ್ಜೆ ಇಡುತ್ತಿದೆ. ಪಾಕಿಸ್ತಾನ ಅಪ್ರಸ್ತುತವಾದರೆ, ಚೀನಾದಂತಹ ರಾಷ್ಟ್ರಗಳನ್ನೂ ಲೆಕ್ಕಿಸುತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT