ಮಂಗಳೂರು: ‘ಭ್ರಷ್ಟಾಚಾರದಲ್ಲಿ ಸ್ವತಃ ಪಾಲು ಪಡೆದಿರುವ ಬಿಜೆಪಿ ಹೈಕಮಾಂಡ್ಗೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆಯಲು ನೈತಿಕ ಹಕ್ಕಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಆರ್ಎಸ್ಎಸ್ ತಾಳಕ್ಕೆ ತಕ್ಕಂತೆ ಹಜ್ಜೆ ಹಾಕುತ್ತಿಲ್ಲ. ಹಾಗಾಗಿಯೇ ಹೈಕಮಾಂಡ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ ಯಡಿಯೂರಪ್ಪ ಅವರನ್ನು ಹೀಗೆ ಅವಮಾನಕರವಾಗಿ ಹೊರದಬ್ಬುವ ಕೆಲಸವನ್ನು ನಾಡಿನ ಲಿಂಗಾಯತ ಸಮುದಾಯದವರು ಹೇಗೆ ಸಹಿಸಿಕೊಳ್ಳುತ್ತಾರೋ ಗೊತ್ತಿಲ್ಲ. ಲಿಂಗಾಯತ ಸಮುದಾಯ ಈಗಲಾದರೂ ಆರ್ಎಸ್ಎಸ್ ತಂತ್ರಗಾರಿಕೆಯನ್ನು ಅರ್ಥೈಸಿಕೊಂಡರೆ ಒಳ್ಳೆಯದು. ಕರ್ನಾಟಕದಲ್ಲಿ ಉತ್ತರ ಪ್ರದೇಶ ಬಿಜೆಪಿ ಮಾದರಿಯ ಕೋಮುವಾದ ಮತ್ತು ಫ್ಯಾಸಿಸ್ಟ್ ಆಡಳಿತವನ್ನು ತರಲು ಬಿಜೆಪಿ ಹೈಕಮಾಂಡ್ ಹೊರಟಿದೆ. ಅದಕ್ಕೆ ಯಡಿಯೂರಪ್ಪ ಅವರಿಗೆ ಗೇಟ್ ಪಾಸ್ ಕೊಡಲು ನಿರ್ಧರಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.