ಭಾನುವಾರ, ಸೆಪ್ಟೆಂಬರ್ 19, 2021
24 °C

ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿಪ್ರಾಯ ವ್ಯಕ್ತಪಡಿಸುವ, ಹೇಳಿಕೆ ಕೊಡುವ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾಗಿದ್ದು ಅನಿವಾರ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. 

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ನಮ್ಮನ್ನು ಬೆಳೆಸಿದ ಪಕ್ಷ, ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರು ನಮಗೆ ಮಾರ್ಗದರ್ಶನ ಮಾಡಿ, ನಮ್ಮ ಕೆಲಸಗಳಿಗೆ ಪ್ರೇರಣೆ ನೀಡಿ, ಸಾಮಾನ್ಯ ಕಾರ್ಯಕರ್ತರಿಗೆ ದೊಡ್ಡ ಜವಾಬ್ದಾರಿ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಮತ್ತು ನನ್ನಂಥವರು, ಹಿರಿಯರು, ಹೈಕಮಾಂಡ್, ರಾಜ್ಯ ಘಟಕದ ಅಧ್ಯಕ್ಷರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ’ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ‘ನಮ್ಮಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ. ಮುಖ್ಯಮಂತ್ರಿ ಪಕ್ಷವನ್ನು ಮಾತೃ ಸಮಾನವಾಗಿ ನೋಡಿ, ಪಕ್ಷದ ಹಿರಿಯರ ಸೂಚನೆ ಪ್ರಕಾರ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಇದು ದೇಶಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಬಲ್ಲ ಕಾರ್ಯಕರ್ತನ ಮಾತು. ಕಾಲಕಾಲಕ್ಕೆ ಹೈಕಮಾಂಡ್‌‌ನಿಂದ ಬರುವ ಸೂಚನೆ ಪಾಲಿಸುವುದಾಗಿ ಹೇಳಿದ್ದಾರೆ. ಮುಂದಿನದ್ದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ’ ಎಂದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು