ಭಾನುವಾರ, ಫೆಬ್ರವರಿ 16, 2020
28 °C
ಕಡಬ: ಮಹಿಳೆಗೆ ಡಿಕ್ಕಿ ಹೊಡೆದು ಕಾರು ಪರಾರಿ ಪ್ರಕರಣ

ಬಿಜೆಪಿ ಮುಖಂಡನ ಕಾರು ವಶ: ಚಾಲಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಡಬ (ಉಪ್ಪಿನಂಗಡಿ):  ಆರು ತಿಂಗಳ ಹಿಂದೆ ಕಡಬ ಸಮೀಪದ ನೆಟ್ಟಣ ಎಂಬಲ್ಲಿ ಡಿಕ್ಕಿ ಹೊಡೆದು ಮಹಿಳೆಯ ಸಾವಿಗೆ ಕಾರಣವಾಗಿದ್ದ ಕಾರು ಪರಾರಿ ಆದ ಪ್ರಕರಣದ ಆರೋಪಿ ಚಾಲಕನನ್ನು ಬಂಧಿಸಿದ ಕಡಬ ಪೊಲೀಸರು ಕಾರನ್ನು ವಶಪಡಿಸಿದ್ದಾರೆ. ಪರಾರಿ ಆಗಿರುವ ಕಾರು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೇರಿದ್ದಾಗಿದೆ.

‘2019 ಸೆಪ್ಟೆಂಬರ್ 9ರಂದು ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ಸುಮತಿ (48) ಎಂಬುವರಿಗೆ ಕಾರು ಡಿಕ್ಕಿ ಹೊಡೆದು ಪರಾರಿ ಆಗಿತ್ತು. ಮಹಿಳೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದರು. ಆದರೆ ಡಿಕ್ಕಿ ಹೊಡೆದ ಕಾರು ನಿಲ್ಲಿಸದೆ ಪರಾರಿ ಆಗಿತ್ತು. ಇದೀಗ ಪರಾರಿ ಆಗಿರುವ ಕಾರನ್ನು ಪತ್ತೆ ಹಚ್ಚಿದ್ದು, ಪ್ರಕರಣ ದಾಖಲಿಸಲಾಗಿದೆ’ ಎಂದು ಕಡಬ ಪೊಲೀಸರು ತಿಳಿಸಿದ್ದಾರೆ.

‘ಮಹಿಳೆಗೆ ಡಿಕ್ಕಿ ಹೊಡೆದು ಪರಾರಿ ಆಗಿರುವ ಕಾರಿನ ಬಗ್ಗೆ ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ತನಿಖೆ ನಡೆಸಿ, ಪ್ರಕರಣವನ್ನು ಭೇದಿಸಲಾಗಿದೆ. ಚಾಲಕ ಪ್ರಶಾಂತ್ ನನ್ನು ಬಂಧಿಸಲಾಗಿದೆ’ ಎಂದು ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ನಾಗೇಶ್ ಕದ್ರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು