ಶುಕ್ರವಾರ, ಅಕ್ಟೋಬರ್ 7, 2022
28 °C

ಪ್ರವೀಣ್ ಮೃತದೇಹ ಮೆರವಣಿಗೆ ವೇಳೆ ಬಿಜೆಪಿ ಮುಖಂಡರ ವಿರುದ್ಧ ಭುಗಿಲೆದ್ದ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಯ: ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ  ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಯ ಮೆರವಣಿಗೆ ‍1 ಗಂಟೆ ಸುಮಾರಿಗೆ ಬೆಳ್ಳಾರೆ ತಲುಪಿದೆ. 

ಈ ವೇಳೆ ಅಂತಿಮ ದರ್ಶನ ಪಡೆಯಲು ಬಂದ ಬಿಜೆಪಿ ನಾಯಕರಿಗೆ ಹಾಗೂ ಆರ್‌ಎಸ್ಎಸ್ ಮುಖಂಡರಿಗೆ ಘೇರಾವ್ ಹಾಕಿ, ದಿಕ್ಕಾರ ಕೂಗಿ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಇದರಿಂದ ಕೆಲ ಕಾರ್ಯಕರ್ತರು ಗಾಯಗೊಂಡಿದ್ದಾರೆ.

ನ್ಯಾಯಕ್ಕಾಗಿ ಆಗ್ರಹಿಸಿದ ಕಾರ್ಯಕರ್ತರು ಸಂಸದ ನಳೀನ್ ಕುಮಾರ್ ಕಟೀಲ್, ಸಚಿವರಾದ ಸುನೀಲ್ ಕುಮಾರ್, ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕರವಾಳಿ ಭಾಗದ ಬಿಜೆಪಿ ಶಾಸಕರು ಕಾರ್ಯಕರ್ತರ ಆಕ್ರೋಶದ ಬಿಸಿ ಅನುಭವಿಸಿದರು.

ಮುಖಂಡರಿಗೆ ಮಾತನಾಡಲು ಅವಕಾಶ ನೀಡದ  ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡರು. ಕಾರ್ಯಕರ್ತರನ್ನು ಸಮಧಾನ ಪಡಿಸಲು ಸಾಧ್ಯವಾಗದೇ ಈ ನಾಯಕರು ದಿಙ್ಮೂಢರಾದರು. ಕೊನೆಗೆ ಕಾರ್ಯಕರ್ತರ ಬೈಗುಳಗಳ ತೀವ್ರತೆಯನ್ನು ತಾಳಲಾಗದೇ ಅಲ್ಲಿಂದ ಜಾಗ ಖಾಲಿ ಮಾಡಲು ಪ್ರಯತ್ನಿಸಿದಾಗ ಕಾರ್ಯಕರ್ತರು ಇನ್ನಷ್ಟು ಆಕ್ರೋಶಗೊಂಡರು.

ನಳಿನ್ , ಸಚಿವ ಸುನೀಲ್ ಕುಮಾರ್ ಹಾಗೂ ಪ್ರಭಾಕರ ಭಟ್ ಕಾರಿನಲ್ಲಿ ಕೂತಾಗ ಆ ಕಾರನ್ನು ಘೇರಾವ್ ಹಾಕಿದ ಕಾರ್ಯಕರ್ತರು ಅದರ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಹೆಲ್ಮೇಟ್ ನಿಂದಲೂ ಹಲ್ಲೆ  ಮಾಡಲು ಯತ್ನಿಸಿದ್ದಾರೆ.

ಇವನ್ನೂ ಓದಿ...

ಬೆಳ್ಳಾರೆ‌: ಬಿಜೆಪಿ ಮುಖಂಡನ ಕೊಲೆ

ಹಿಂಸೆಗೆ ಧರ್ಮವಿಲ್ಲ, ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು