ಮಂಗಳೂರು: ಬಿಜೆಪಿಯ ನಾಯಕ ರಾಮಚಂದರ್ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ನಿಕಟ ಪೂರ್ವ ಸದಸ್ಯರಾಗಿದ್ದ ಅವರು ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಮೊಗವೀರ ಸಮುದಾಯದ ಮುಖಂಡರಾಗಿದ್ದ ಅವರು ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ. ಬಿ.ಎಸ್.ಯಡಿಯೂರಪ್ಪ ಅವರ ನಿಕಟವರ್ತಿಯಾಗಿದ್ದ ಅವರು ಕೆಜೆಪಿ ಪಕ್ಷ ಸೇರಿ ಬಳಿಕ ಬಿಜೆಪಿಗೆ ಮರಳಿದ್ದರು.

ಸುರತ್ಕಲ್ ಕ್ಷೇತ್ರದಿಂದ ಬಿಜೆಪಿಯಿಂದ ಹಾಗೂ ಕೆಜೆಪಿಯಿಂದ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಅವಿವಾಹಿತರಾಗಿದ್ದ ಅವರು, ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.