ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರ ಕಾರ್ಯ ಮತ್ತಷ್ಟು ಚುರುಕುಗೊಳಿಸಿ: ರಾಜೇಶ್ ಕಾವೇರಿ ಸೂಚನೆ

Published 29 ಮಾರ್ಚ್ 2024, 5:48 IST
Last Updated 29 ಮಾರ್ಚ್ 2024, 5:48 IST
ಅಕ್ಷರ ಗಾತ್ರ

ಮಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕು‘ ಎಂದು ಬಿಜೆಪಿಯ ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಪಕ್ಷದ ಜಿಲ್ಲಾ ಮುಖಂಡರಿಗೆ ಸೂಚಿಸಿದರು.

ಲೋಕಸಭಾ ಚುನಾವಣೆಯ ಪೂರ್ವತಯಾರಿಯ ಅವಲೋಕನದ ಸಲುವಾಗಿ ಇಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಈವರೆಗೆ  ಬೂತ್ ಮಟ್ಟದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಗಳ ವರದಿ ಪಡೆದ ಅವರು, ‘ಮತದಾರರನ್ನು ತಲುಪಲು ಇನ್ನಷ್ಟು ಕಾರ್ಯಚಟುವಟಿಕೆ ಹಮ್ಮಿಕೊಳ್ಳಬೇಕು.  ಪ್ರಚಾರ ಕಾರ್ಯಕ್ಕೆ ಮತ್ತಷ್ಟು ವೇಗ ನೀಡುವಂತೆ ಕಾರ್ಯಕರ್ತರನ್ನು ಪ್ರೇರೇಪಿಸಬೇಕು’ ಎಂದರು. 

ಪಕ್ಷದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ‘ಏ. 4ರಂದು ನಡೆಯಲಿರುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಯಶಸ್ವಿಗೊಳಿಸಿ’ ಎಂದು ವಿನಂತಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಲೋಕಸಭಾ ಚುನಾವಣಾ ಸಂಚಾಲಕರಾದ ನಿತಿನ್ ಕುಮಾರ್, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ,  ಶಾಸಕರು, ವಿಧಾನಪರಿಷತ್ ಸದಸ್ಯರು, ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು, ಪ್ರಕೋಷ್ಠಗಳ ಸಂಚಾಲಕರು ಭಾಗವಹಿಸಿದ್ದರು. ದೇವದಾಸ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT