ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐವನ್ ಮೇಲೆ ಎಫ್‌ಐಆರ್‌ಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹ

Published : 21 ಆಗಸ್ಟ್ 2024, 6:50 IST
Last Updated : 21 ಆಗಸ್ಟ್ 2024, 6:50 IST
ಫಾಲೋ ಮಾಡಿ
Comments

ಮಂಗಳೂರು: ನಗರದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿ, ಅರಾಜಕತೆ ಸೃಷ್ಟಿಸಲು ಯತ್ನಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಒತ್ತಾಯಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸಾ, ‘ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡುವ ಐವನ್ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಬಿಡುಗಡೆಗೊಳಿಸಬೇಕು. ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಯತ್ನ ಐವನ್ ಮೂಲಕ ಬಯಲಾಗಿದೆ. ಅವರನ್ನು ಬಂಧಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು’ ಎಂದರು.

ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆದರೆ, ಇದಕ್ಕೆ ಪ್ರಚೋದನೆ ನೀಡಿದ ಐವನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸದೆ ಪೊಲೀಸ್ ಇಲಾಖೆ ತಾರತಮ್ಯ ತೋರಿದೆ. ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಪ್ರತಿಭಟನೆ ವೇಳೆ ಅಲ್ಪಸಂಖ್ಯಾತ ವ್ಯಕ್ತಿಗೆ ಸೇರಿದ ಬಸ್‌ ಮೇಲೆ ಕಲ್ಲು ತೂರಾಟ ನಡೆಸಲು ಪ್ರೇರಣೆ ನೀಡಿದೆ ಎಂದು ಆರೋಪಿಸಿದರು.

ಬಿಜೆಪಿ ಪ್ರಮುಖರಾದ ಟಿ.ಎ. ಶನವಾಜ್, ಅರುಣ್ ಶೇಟ್, ಜೆಸ್ಸೆಲ್ ಡಿಸೋಜ, ಫ್ರೆಡ್ರಿಕ್ ಪೌಲ್, ಸಿರಾಜ್ ಮುಡಿಪು, ಎ.ಕೆ. ಜಮಾಲ್, ವಿಲ್ಫ್ರೆಡ್ ಸಲ್ಡಾನ, ಟೀನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT