ಎಸ್ಐಟಿ ರಚನೆ ಸ್ವಾಗತಿಸಿದ್ದೆವು. ತನಿಖೆ ನಡೆಯುವಾಗ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ತಡೆಯಲು ಸರ್ಕಾರ ಕ್ರಮ ವಹಿಸಬೇಕಿತ್ತು. ದೂರು ನೀಡಿದ ವ್ಯಕ್ತಿಯನ್ನು 24 ಗಂಟೆಗಳಲ್ಲಿ ಒದ್ದು ಒಳಗೆ ಹಾಕಬೇಕಿತ್ತು.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಮೂವರು ಐಪಿಎಸ್ ಅಧಿಕಾರಿಗಳನ್ನು ಬಿಟ್ಟು ಬಾಹುಬಲಿ ಬೆಟ್ಟ ಅಗೆದರು. ಬೇರೆ ಧರ್ಮದ ದರ್ಗಾದಲ್ಲಿ ಇನ್ನೊಂದು ಹೆಣ ಹುಗಿದಿದ್ದೇನೆ ಎಂದು ಯಾರಾದರೂ ಹೇಳಿದರೆ ಅಲ್ಲಿ ಅಗೆಯಲಿ ನೋಡೋಣ.
-ಪ್ರಲ್ಹಾದ ಜೋಶಿ, ಕೇಂದ್ರ ಸಚಿವ
ಸಿದ್ದರಾಮಯ್ಯ ಸುತ್ತ ನಕ್ಸಲ್ ಗ್ಯಾಂಗ್ ತಿಮರೋಡಿ ಗ್ಯಾಂಗ್ ಸೇರಿಕೊಂಡಿದೆ. ಇವರೆಲ್ಲ ನಗರ ನಕ್ಸಲರು. ಷಡ್ಯಂತ್ರ ಬಗ್ಗೆ ಎನ್ಐಎ ತನಿಖೆ ನಡೆಸಿದರೆ ಮಾತ್ರ ನ್ಯಾಯ ಸಿಗಲಿದೆ.