ಭಾನುವಾರ, ಸೆಪ್ಟೆಂಬರ್ 25, 2022
21 °C

ಸಾವರ್ಕರ್‌ ಭಾವಚಿತ್ರ ಬಳಕೆಗೆ ವಿರೋಧ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಜಪೆ: ಗುರುಪುರ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಭಾವಚಿತ್ರ ಬಳಸಿರುವುದನ್ನು ವಿರೋಧಿಸಿ, ಶಾಲಾ ಶಿಕ್ಷಕಿಯಿಂದ ಕ್ಷಮೆ ಕೇಳುವಂತೆ ಮಾಡಿದ್ದ ಪಂಚಾಯಿತಿಯ ಎಸ್‍ಡಿಪಿಐ ಮತ್ತು ಕಾಂಗ್ರೆಸ್‌ ಸದಸ್ಯರು ಹಾಗೂ ಅವರಿಗೆ ಪರೋಕ್ಷ ಬೆಂಬಲ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಗಳವಾರ ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಾರ್ಯಕರ್ತರು ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿಯ ಅಧಿಕಾರಿ ಲೋಕನಾಥ್ ಅವರ ಮೂಲಕ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮನವಿ ನೀಡಿದ ಪ್ರತಿಭಟನಾಕಾರರು, ಸದಸ್ಯರ ಸದಸ್ಯತ್ವ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಪ್ರಮುಖರಾದ ತಿಲಕ್‍ರಾಜ್ ಕೃಷ್ಣಾಪುರ,  ಅಮೃತಪಾಲ್ ಡಿ ಸೋಜ,  ರಾಜೇಶ್ ಕೊಟ್ಟಾರಿ, ಶ್ವೇತಾ ಪೂಜಾರಿ, ಭರತ್‍ರಾಜ್ ಕೃಷ್ಣಾಪುರ, ಸಂದೀಪ್ ಪಚ್ಚನಾಡಿ, ಹರೀಶ್ ಮೂಡುಶೆಡ್ಡೆ, ಸಚಿನ್ ಹೆಗ್ಡೆ ನೀರುಮಾರ್ಗ, ಶೋಧನ್ ಅದ್ಯಪಾಡಿ, ಪ್ರೇಮ್ ಪೊಳಲಿ, ಲಕ್ಷ್ಮಣ್ ಶೆಟ್ಟಿಗಾರ್ ಇದ್ದರು.

ಗ್ರಾಮ ಪಂಚಾಯಿತಿಯ ಎಸ್‍ಡಿಪಿಐ ಬೆಂಬಲಿತ ಸದಸ್ಯರಾದ ಎ. ಕೆ. ರಿಯಾಝ್, ಮನ್ಸೂರ್, ಅಶ್ರಫ್, ಶಾಹಿಕ್ ಹಾಗೂ ಇತರರ ವಿರುದ್ಧ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು