ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಬಿಜೆಪಿ ಪ್ರತಿಭಟನೆ, ಹೆದ್ದಾರಿ ತಡೆ

Published 20 ಜೂನ್ 2024, 14:14 IST
Last Updated 20 ಜೂನ್ 2024, 14:14 IST
ಅಕ್ಷರ ಗಾತ್ರ

ಬಂಟ್ವಾಳ: ರಾಜ್ಯದಲ್ಲಿ ಬಿಟ್ಟಿ ಭಾಗ್ಯದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿಢೀರನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಆರೋಪಿಸಿದರು.

ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಬಿಜೆಪಿ ವತಿಯಿಂದ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್,  ಆರ್.ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಮತ್ತಿತರರು ಮಾತನಾಡಿದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಪೂಜಾ ಪೈ, ರಾಮದಾಸ ಬಂಟ್ವಾಳ, ಬಿ.ದೇವದಾಸ ಶೆಟ್ಟಿ, ಮಾಧವ ಎಸ್. ಮಾವೆ, ವಿಕಾಸ್ ಪುತ್ತೂರು, ರವೀಶ್ ಶೆಟ್ಟಿ ಕರ್ಕಳ, ಡೊಂಬಯ ಅರಳ, ಎ.ಗೋವಿಂದ ಪ್ರಭು, ಬಿ.ದಿನೇಶ ಭಂಡಾರಿ, ಪುರುಷೋತ್ತಮ ಶೆಟ್ಟಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT