ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳ್ತಂಗಡಿ | ಬೇಡಿಕೆ ಈಡೇರಿಸಲು ಆಗ್ರಹ, ಬಿಜೆಪಿ ಪ್ರತಿಭಟನೆ

Published 2 ಜುಲೈ 2024, 16:13 IST
Last Updated 2 ಜುಲೈ 2024, 16:13 IST
ಅಕ್ಷರ ಗಾತ್ರ

ಬೆಳ್ತಂಗಡಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಘಟಕ, ಜಿಲ್ಲಾ ರೈತ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನಾ ಸಭೆ ತಾಲ್ಲೂಕು ಆಡಳಿ ಸೌಧದ ಮುಂಭಾಗದಲ್ಲಿ ಮಂಗಳವಾರ ನಡೆಯಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ‘ಸಂಸತ್‌ನ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕನಾಗಿ ಕಳಂಕ ತಂದಿದ್ದಾರೆ’ ಎಂದು ದೂರಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರ ನಂಬಿಕೆ ಇಲ್ಲದ ಸರ್ಕಾರ. ಹಾಲಿನ ದರ ಏರಿಸಿ ಜನ ವಿರೋಧಿಯಾಗಿದೆ. ಗ್ಯಾರಂಟಿಯ ಯೋಜನೆಯಲ್ಲಿ ಕಮಿಷನ್ ಪಡೆಯುತ್ತಿದ್ದಾರೆ’ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ರೈತ ಪರವಾರವಾಗಿದ್ದ ಹಲವು ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಹಿಂಪಡೆದು ಅನ್ಯಾಯ ಮಾಡಿದೆ ಎಂದು ಹೇಳಿದರು.

ಜಿಲ್ಲಾ ರೈತಮೋರ್ಚಾದ ಅಧ್ಯಕ್ಷ ಗಣೇಶ್ ನಾವೂರು, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರೆಮಾನಂದ ಶೆಟ್ಟಿ, ಮಹಿಳಾ ಮೋರ್ಚಾದ ಮಂಜುಳಾ ರಾವ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಮುಖರಾದ ಗಣೇಶ್ ಪುತ್ರನ್, ಚೆನ್ನಪ್ಪ ಕೋಟ್ಯಾನ್, ಕುಶಾಲಪ್ಪ ಗೌಡ ಪೂವಾಜೆ, ಹರಿಕೃಷ್ಣ ಬಂಟ್ವಾಳ, ಜಯಂತ್ ಕೋಟ್ಯಾನ್, ಸೀತಾರಾಮ್, ವಿಜಯ ಗೌಡ ವೇಣೂರು, ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿನೇಶ್ ಚಾರ್ಮಾಡಿ, ವಿದ್ಯಾ ಶ್ರೀನಿವಾಸ್, ಪೂರ್ಣಿಮಾ ಮುಂಡಾಜೆ, ಶಶಿರಾಜ್ ಶೆಟ್ಟಿ, ಶಶಿಧರ್ ಕಲ್ಮಂಜ ಭಾಗವಹಿಸಿದ್ದರು.

ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತೆಯರು ಹಾಲು ಹಾಕದೆ ಚಹಾ ಮಾಡಿದರು. 

ಹಾಲಿನ ದರ ಏರಿಕೆಯನ್ನು ಹಿಂಪಡೆಯಲು, ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ಬಿಡುಗಡೆ ಮಾಡುವಂತೆ ಉಪತಹಶೀಲ್ದಾರ್ ರವಿಕುಮಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT