ಶುಕ್ರವಾರ, ಅಕ್ಟೋಬರ್ 23, 2020
21 °C

ಜಲಫಿರಂಗಿ ಪ್ರಯೋಗ: ಕಾರ್ಯಕರ್ತೆಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಆರೋಪ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್ ಹಾಗೂ ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಎದುರು ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪೊಲೀಸರು ಜಲಫಿರಂಗಿ ಬಳಸಿದರು. ಇದರಿಂದ ಕಾರ್ಯಕರ್ತೆಯೊಬ್ಬರು ಗಾಯಗೊಂಡಿದ್ದಾರೆ.

ವಿದ್ಯಾನಗರ ಬಿ.ಸಿ. ರೋಡ್‌ನಿಂದ ಮೆರವಣಿಗೆ ಮೂಲಕ ಬಂದ ಕಾರ್ಯಕರ್ತರು ಜಿಲ್ಲಾಧಿಕಾರಿ ಗೇಟ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ದೂಡಿ ಮುನ್ನುಗ್ಗಲು ಯತ್ನಿಸಿದರು. ಕೆಲ ಕಾರ್ಯಕರ್ತರು ಬ್ಯಾರಿಕೇಡ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಜಲಫಿರಂಗಿ ಪ್ರಯೋಗಿಸಿದರು. ಕಾರ್ಯಕರ್ತೆ ಅಂಜು ಜೋಸ್ ಗಾಯಗೊಂಡರು.

ಬಳಿಕ ನಡೆದ ಪ್ರತಿಭಟನೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಶ್ರೀಕಾಂತ್ ಉದ್ಘಾಟಿಸಿದರು. ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಧನಂಜಯ ಮಧೂರು ಅಧ್ಯಕ್ಷತೆ ವಹಿಸಿದ್ದರು. ಅಂಜು ಜೋಸ್ ಪಿ., ಸುಧಾಮ ಗೋಸಾಡ, ಎನ್.ಸತೀಶ್, ಪಿ.ಆರ್. ಸುನಿಲ್, ವಿಜಯಕುಮಾರ್ ರೈ, ರಕ್ಷಿತ್ ಬದಿಯಡ್ಕ, ಅಜಿತ್, ಸಾಗರ್ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು