ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುತ್ತೂರು | 7 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಧರಣಿ: ಬಿಜೆಪಿ ಎಚ್ಚರಿಕೆ

ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ
Published 4 ಜುಲೈ 2024, 13:33 IST
Last Updated 4 ಜುಲೈ 2024, 13:33 IST
ಅಕ್ಷರ ಗಾತ್ರ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛತೆ, ಅಪಾಯಕಾರಿ ಮರದ ಕೊಂಬೆಗಳ ತೆರವು, ರಸ್ತೆ ಬದಿಯ ಗಿಡಗಂಟಿಯನ್ನು ಮಳೆಗಾಲಕ್ಕೆ ಮುನ್ನ ತೆರವು ಮಾಡದೆ ಇರುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅನುದಾನ ಹಂಚಿಕೆ, ಕ್ರಿಯಾಯೋಜನೆಯನ್ನು ಸದಸ್ಯರ ಗಮನಕ್ಕೆ ತಂದು ಮಾಡಬೇಕು ಎಂದು ಆಗ್ರಹಿಸಿ ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯರು ಗುರುವಾರ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ವಾರದೊಳಗೆ ಸಮಸ್ಯೆ ಬಗೆಹರಿಸಲು ಮುಂದಾಗದಿದ್ದರೆ ನಗರಸಭೆಯ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್.ಗೌರಿ, ಸದಸ್ಯರಾದ ಪಿ.ಜಿ.ಜಗನ್ನಿವಾಸ ರಾವ್, ಗೌರಿ ಬನ್ನೂರು, ಮೋಹಿನಿ ವಿಶ್ವನಾಥ, ಲೀಲಾವತಿ, ಸುಂದರ ಪೂಜಾರಿ ಬಡಾವು, ಪ್ರೇಮ್ ಕುಮಾರ್, ರಮೇಶ್ ರೈ, ಪ್ರೇಮ ನಂದಿಲ, ಪದ್ಮನಾಭ ನಾಯ್ಕ, ಸಂತೋಷ ಕುಮಾರ್, ನವೀನ್ ಪೆರಿಯತ್ತೋಡಿ, ಇಂದಿರಾ ಆಚಾರ್ಯ, ಮನೋಹರ್ ಕಲ್ಲಾರೆ, ಬಾಲಚಂದ್ರ ಕೆಮ್ಮಿಂಜೆ, ಮಮತಾ ರಂಜನ್, ಪೂರ್ಣಿಮಾ, ವಸಂತ ಕಾರೆಕ್ಕಾಡು, ಪದ್ಮನಾಭ ನಾಯ್ಕ, ದೀಕ್ಷಾ ಪೈ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ ಅವರು ನಿಯೋಗದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT