ಶನಿವಾರ, ಡಿಸೆಂಬರ್ 3, 2022
21 °C

ಪ್ರತಿಭಾ ಕುಳಾಯಿ ಹೇಳಿಕೆಗೆ ಬಿಜೆಪಿ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಸುರತ್ಕಲ್ ಟೋಲ್ ಗೇಟ್‌ಗೆ ಸಂಬಂಧಿಸಿ ಹೋರಾಟ ಮಾಡುತ್ತಿರುವ ಡಿವೈಎಫ್ಐಗೆ ಬೆಂಬಲ ಸೂಚಿಸಿ ಮಾತನಾಡಿದ ನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಘಟಕ ಹೇಳಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯದರ್ಶಿ ಪೂಜಾ ಪೈ ಅವರು ‘ಪಾಲಿಕೆಯ ವಾರ್ಡ್‌ನಲ್ಲಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗದ  ಪ್ರತಿಭಾ ಕುಳಾಯಿ, ಜಿಲ್ಲೆಗೆ ₹ 20 ಸಾವಿರ ಕೋಟಿ ಮೊತ್ತದ ಅನುದಾನ ತಂದಿರುವ ಸಂಸದರನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಇದು ಅವರು ಪ್ರತಿನಿಧಿಸುತ್ತಿರುವ ಪಕ್ಷದ ಕೀಳುಮಟ್ಟದ ರಾಜಕೀಯವನ್ನು ಬಿಂಬಿಸುತ್ತದೆ. ಇಂಥ ಪ್ರವೃತ್ತಿಯನ್ನು ಆ ಪಕ್ಷ ಮತ್ತು ಪ್ರತಿಭಾ ಅವರು ನಿಲ್ಲಿಸಬೇಕು’ ಎಂದರು. 

ಕೊಲೆಗಟುಕನಿಗೆ ಗಲ್ಲು ಶಿಕ್ಷೆಯಾಗಲಿ: ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜಿಪೆ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ‘ನವದೆಹಲಿಯಲ್ಲಿ ಲವ್‌ ಜಿಹಾದ್ ಮೂಲಕ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಕೊಂದು 35 ತುಂಡು ಮಾಡಿದಾತನನ್ನು ಗಲ್ಲಿಗೇರಿಸಬೇಕು‘ ಎಂದರು.

ಪ್ರಭಾ ಮಾಲಿನಿ, ಮಂಗಳಾ ಆಚಾರ್ಯ ಹಾಗೂ ಸೇವಂತಿ ಶ್ರೀಯಾನ್ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು