ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ವರ್ಷಗಳ ಬಳಿಕ ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

Last Updated 4 ನವೆಂಬರ್ 2020, 3:44 IST
ಅಕ್ಷರ ಗಾತ್ರ

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಇದೇ 5 ರಂದು ನಗರದ ನಗರದ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿಯೂ ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ (ಇದೇ 4) ಸಂಜೆ 7 ಗಂಟೆಗೆ ನಗರಕ್ಕೆ ಬರಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಇದೇ 5ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುವ ಎರಡು ಸಭೆಗಳಲ್ಲಿ ಭಾಗವಹಿಸಲಿದ್ದು, 5ರಂದು ರಾತ್ರಿ 7.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದರು.

ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಡಿ.ವಿ. ಸದಾನಂದ ಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ರಾಷ್ಟ್ರೀಯ ಮುಖಂಡರು, ಉಪ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ 20 ವರ್ಷಗಳ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಮುಂಬರುವ ಗ್ರಾಮ ಪಂಚಾಯಿತಿ, ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ದೃಷ್ಟಿಯಿಂದ ಮಹತ್ವದ್ದಾಗಿದೆ. ಪಕ್ಷದ ಸಂಘಟನೆಯ ದೃಷ್ಟಿಯಿಂದ ಈ ಸಭೆ ಮಹತ್ವ ಪಡೆದಿದೆ ಎಂದು ವಿವರಿಸಿದರು.

ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ವಿವಿಧ ಗೋಷ್ಠಿಗಳೊಂದಿಗೆ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಬೆಳಿಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ಹೋಟೆಲ್‌ ಓಷಿಯನ್‌ ಪರ್ಲ್‌ನಲ್ಲಿ ಕೋರ್‌ ಕಮಿಟಿ ಸಭೆ ಜರುಗಲಿದೆ ಎಂದರು.

ಪಂಚರತ್ನ ಸಮಿತಿ: ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿ ಬೂತ್ ಮಟ್ಟದಲ್ಲಿ 5 ಜನ ಸದಸ್ಯರ ಪಂಚರತ್ನ ಸಮಿತಿಯನ್ನು ರಚಿಸಲಾಗುವುದು. ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬೂತ್ ಸಮಿತಿಯೊಂದಿಗೆ ಈ ತಂಡ ಕಾರ್ಯ
ನಿರ್ವಹಿಸಲಿದೆ ಎಂದು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಂ. ಸುದರ್ಶನ್, ಬಿಜೆಪಿ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ರಾಜೇಶ್ ಕಾವೇರಿ, ಜಗದೀಶ್ ಶೇಣವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT