ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯಲು ಬಿಜೆಪಿ ಆಗ್ರಹ

Published 15 ಫೆಬ್ರುವರಿ 2024, 16:32 IST
Last Updated 15 ಫೆಬ್ರುವರಿ 2024, 16:32 IST
ಅಕ್ಷರ ಗಾತ್ರ

ಮಂಗಳೂರು: ನಗರದ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ಮೇಲೆ ದಾಖಲಿಸಿರುವ ಪ್ರಕರಣವನ್ನು ಒಂದು ವಾರದಲ್ಲಿ ಹಿಂಪಡೆಯದಿದ್ದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶ್ರೀರಾಮ ಹಾಗೂ ಹಿಂದೂ ದೇವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲಾಗಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಮೇಲೆ ಪ್ರಕರಣ ದಾಖಲಿಸುವುದು ಕಾಂಗ್ರೆಸ್ ಮಾನಸಿಕತೆಯನ್ನು ತೋರಿಸುತ್ತದೆ. ಹಿಂದೂಗಳ ಭಾವನೆ ಹತ್ತಿಕ್ಕುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದರು.

‘ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್‌, ಧರ್ಮಗಳ ನಡುವೆ ಕಂದಕ ಸೃಷ್ಟಿಸಿ, ಮಕ್ಕಳ ಮನಸ್ಸಿನಲ್ಲಿ ಕೆಟ್ಟ ವಿಚಾರ ತುಂಬುತ್ತಿರುವುದು ಪ್ರಜಾತಂತ್ರದ ದುರಂತವಾಗಿದೆ’ ಎಂದು ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ ಹೇಳಿದರು.

ಬಿಜೆಪಿ ಮುಖಂಡರಾದ ರವಿಶಂಕರ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್, ರಮೇಶ್ ಕಂಡೆಟ್ಟು, ರಾಜೇಶ್ ಕೊಟ್ಟಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT