ಗುರುವಾರ , ಸೆಪ್ಟೆಂಬರ್ 23, 2021
22 °C
ಕೈಕೊಟ್ಟ ಕಾಂಗ್ರೆಸ್ ಸದಸ್ಯ

ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಬಿಜೆಪಿ ತೆಕ್ಕೆಗೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ಮೂಡುಬಿದಿರೆ ತಾಲ್ಲೂಕು ಪಂಚಾಯಿತಿನ ಪ್ರಥಮ ಅಧ್ಯಕ್ಷೆಯಾಗಿ ನೆಲ್ಲಿಕಾರು ಕ್ಷೇತ್ರದ ರೇಖಾ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಬೆಳುವಾಯಿ ಕೇತ್ರದ ಸಂತೋಷ್ ಆಯ್ಕೆಯಾದರು.

8 ಸ್ಥಾನಗಳ ತಾಲ್ಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದಿದ್ದವು. ಸಾಮಾನ್ಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ರೇಖಾ ಸಾಲ್ಯಾನ್ ಹಾಗೂ ಕಾಂಗ್ರೆಸ್‌ನಿಂದ ರೀಟಾ ಕುಟಿನ್ಹಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸಂತೋಷ್ ಮತ್ತು ಕಾಂಗ್ರೆಸ್‌ನಿಂದ ಪ್ರಶಾಂತ್ ಅಮೀನ್ ಸ್ಪರ್ಧಿಸಿದ್ದರು. ಕಲ್ಲಮುಂಡ್ಕೂರು ಕ್ಷೇತ್ರದ ಕಾಂಗ್ರೆಸ್ ಸದಸ್ಯ ಸುಕುಮಾರ್ ಸನಿಲ್ ಗೈರಾಗಿದ್ದು, ಒಂದು ಮತದ ಅಂತರದಲ್ಲಿ ಬಿಜೆಪಿ ಗೆದ್ದುಕೊಂಡಿತು. ಸುಕುಮಾರ್ ಬೆಳಗ್ಗಿನಿಂದಲೆ ಕಾಂಗ್ರೆಸ್ ಸಂಪರ್ಕಕ್ಕೆ ಸಿಗಲಿಲ್ಲ ಎನ್ನಲಾಗಿದೆ. ‘ಆಪರೇಷನ್ ಕಮಲ’ದ ಬಗ್ಗೆ ಗುಸುಗುಸು ಕೇಳಿಬಂದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು