ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕಪಿತಾನಿಯೊನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ ಯತ್ನ

Published 26 ಏಪ್ರಿಲ್ 2024, 4:54 IST
Last Updated 26 ಏಪ್ರಿಲ್ 2024, 4:54 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಕಪಿತಾನಿಯೊ ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಮತ ಚಲಾಯಿಸಿ ಹೊರಗೆ ಬಂದಾಗ ಈ ಘಟನೆ ನಡೆದಿದೆ.

ಪದ್ಮರಾಜ್ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮಾಧ್ಯಮದವರು ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು''ಎಂದು ಸಂದೀಪ್ ಎಕ್ಕೂರು ಎಂಬಾತ ಪ್ರಶ್ನಿಸಿದ್ದಾನೆ. ಸ್ಥಳದಲ್ಲಿದ್ದ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಆಗ ಪೊಲೀಸ್ ಅಧಿಕಾರಿ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದುರಿಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಅಧಿಕಾರಿ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT