ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ: BJP ಯುವ ಮೋರ್ಚಾ ಕಾರ್ಯಕರ್ತರು ಪೊಲೀಸ್ ವಶಕ್ಕೆ

Published 28 ಫೆಬ್ರುವರಿ 2024, 9:13 IST
Last Updated 28 ಫೆಬ್ರುವರಿ 2024, 9:13 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬುಧವಾರ ಯತ್ನಿಸಿದರು.

'ಪೊಲೀಸರು ಅಚರನ್ನು ವಶಕ್ಕೆ ಪಡೆದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವುದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ರಾಷ್ಟ್ರ ಭಕ್ತರ ಹಕ್ಕನ್ನು ಹತ್ತಿಕ್ಕಿ ಅನ್ಯಾಯ ಮಾಡುತ್ತಿದೆ' ಎಂದು ಯುವ ಮೋರ್ಚಾ ಕಾರ್ಯಕರ್ತರು ಆಪಾದಿಸಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿಗಳಾದ ಭರತರಾಜ್, ಉಮೇಶ್ ಕುಲಾಲ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಒಬಿಸಿ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷರಾದ ಮಹೇಶ್ ಜೋಗಿ, ಪ್ರಕಾಶ್ ಗರೋಡಿ, ಸಚಿನ್ ರಾಜ್ ರಾಯ್, ವಿಜಯಕುಮಾರ್ ಶೆಟ್ಟಿ, ದಿನೇಶ್ ಅಮ್ತೂರ್, ನಿತಿನ್ ಭಂಡಾರಿ, ಕುಮಾರ್ ಪ್ರಸಾದ್ ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT