ಶನಿವಾರ, ಮಾರ್ಚ್ 25, 2023
26 °C

ಕಪ್ಪು ಶಿಲೀಂಧ್ರ: 2 ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಮತ್ತೆ ಎರಡು ಪ್ರಕರಣಗಳು ಮಂಗಳವಾರ ದಾಖಲಾಗಿವೆ. ಇವುಗಳಲ್ಲಿ ಒಂದು ಹಾವೇರಿ, ಮತ್ತೊಂದು ಚಿಕ್ಕಮಗಳೂರು ಜಿಲ್ಲೆಗೆ ಸೇರಿದ್ದಾಗಿದೆ.

ಜಿಲ್ಲೆಯಲ್ಲಿ ಒಟ್ಟು 32 ಕಪ್ಪು ಶಿಲೀಂಧ್ರ ಸಕ್ರಿಯ ಪ್ರಕರಣಗಳು ಇವೆ. ಏಳು ರೋಗಿಗಳು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದರೆ, ಇನ್ನುಳಿದ 25 ಜನರು ಹೊರ ಜಿಲ್ಲೆಯವರಾಗಿದ್ದಾರೆ. ಈವರೆಗೆ ಕಪ್ಪು ಶಿಲೀಂಧ್ರ ತಗುಲಿದ 36 ಜನರು ಗುಣಮುಖರಾಗಿದ್ದಾರೆ. ಒಟ್ಟು 21 ಜನರು ಮೃತಪಟ್ಟಿದ್ದಾರೆ.

ಪಾಸಿಟಿವಿಟಿ ದರ ಶೇ 3.31: ಜಿಲ್ಲೆಯಲ್ಲಿ ಮಂಗಳವಾರ 216 ಜನರಿಗೆ ಕೋವಿಡ್ ದೃಢಪಟ್ಟಿದೆ. ಮೃತಪಟ್ಟಿರುವ 13 ಜನರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ. 613 ಜನರು ಗುಣಮುಖರಾಗಿದ್ದಾರೆ. ಮಂಗಳೂರಿನಲ್ಲಿ ಒಂದು ಕಂಟೈನ್‌ಮೆಂಟ್ ವಲಯ ನಿಗದಿಪಡಿಸಲಾಗಿದೆ.

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 114 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 69 ಜನರು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 994 ಸಕ್ರಿಯ ಪ್ರಕರಣಗಳು ಇವೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 613 ಜನರಿಗೆ ಕೋವಿಡ್ ದೃಢಪಟ್ಟಿದೆ. 617 ಜನರು ಗುಣಮುಖರಾಗಿದ್ದಾರೆ. 5,646 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.