ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಿಯಡ್ಕ|ನಿರಂತರ ರಕ್ತದಾನದಿಂದ ಆರೋಗ್ಯ ವೃದ್ಧಿ: ಡಾ.ಜಯಗೋವಿಂದ

Published 4 ಜೂನ್ 2023, 11:24 IST
Last Updated 4 ಜೂನ್ 2023, 11:24 IST
ಅಕ್ಷರ ಗಾತ್ರ

ಬದಿಯಡ್ಕ: ‘ನಿರಂತರ ರಕ್ತದಾನದಿಂದ ಆರೋಗ್ಯ ವೃದ್ಧಿಯಾಗುತ್ತದೆ’ ಎಂದು ಆಯುರ್ವೇದ ತಜ್ಞ ಡಾ.ಜಯಗೋವಿಂದ ಹೇಳಿದರು.

ನವಜೀವನ ಶಾಲೆಯ ಸಭಾಂಗಣದಲ್ಲಿ ಬದಿಯಡ್ಕದ ರೋಟರಿ ಕ್ಲಬ್‌ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಕ್ತದಾನದಿಂದ ಹೃದಯದ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ರಕ್ತದಾನ ಇನ್ನೊಂದು ಜೀವ ಉಳಿಸಲು ಸಹಕಾರಿಯಾಗುತ್ತದೆ. ಯುವಕರು ಸೇವಾ ಮನೋಭಾವದಿಂದ ರಕ್ತದಾನ ಮಾಡಬೇಕು’ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಬದಿಯಡ್ಕ ರೋಟರಿ ಘಟಕದ ಅಧ್ಯಕ್ಷ ರಾಧಾಕೃಷ್ಣ ಪೈ ವಹಿಸಿದ್ದರು.

ಕೋಶಾಧಿಕಾರಿ ಬಿ.ಕೇಶವ, ಉಪಾಧ್ಯಕ್ಷ ಶಿಬು ಜೋನ್‌ ಇದ್ದರು.

ರೋಟರಿ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಗೌರವಿಸಲಾಯಿತು. ಪಿ.ಎಸ್‌.ಸಂತೋಷ್ ಕುಮಾರ್ ಸ್ವಾಗತಿಸಿದರು. ರಾಘವೇಂದ್ರ ಪ್ರಸಾದ್ ವಂದಿಸಿದರು. ಕಾಸರಗೋಡು ಬ್ಲಡ್‌ ಬ್ಯಾಂಕ್‌ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಹಲವರು ರಕ್ತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT