ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ, ಬೋಟ್ಗೆ ಬೆಂಕಿ ಹೊತ್ತಿ ಉರಿದು, ₹1 ಕೋಟಿಯಷ್ಟು ನಷ್ಟವಾಗಿದೆ ಎಂದು ಕಂಕನಾಡಿ ಮುಹಮ್ಮದ್ ಫಾರೂಕ್ ಅವರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಹಾಗೂ ಕರಾವಳಿ ಕಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಮಗಳು ಫಾತಿಮಾ ಶಾಫಾ ಮಾಲೀಕತ್ವದ ‘ಮಶ್ರಿಕ್’ ಹೆಸರಿನ ಬೋಟ್ ಡಿ.10ರಂದು ಬೆಳಗಿನ ಜಾವ ಮಂಗಳೂರು ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು. ಅದೇ ದಿನ ಸಂಜೆ ಸುರತ್ಕಲ್-ಕಾಪು ಕರಾವಳಿ ತೀರದಿಂದ ಸುಮಾರು 12 ನಾಟಿಕಲ್ ಮೈಲ್ ಉತ್ತರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್ನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೋಟ್ನಲ್ಲಿದ್ದವರು ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಮೀಪದಲ್ಲಿದ್ದ ಇನ್ನೊಂದು ಬೋಟ್ನವರು ನಮ್ಮ ಬೋಟ್ನಲ್ಲಿದ್ದ ಏಳು ಮಂದಿಯನ್ನು ರಕ್ಷಿಸಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ’ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.