ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೋಣಿ ದುರಂತ: ಇಬ್ಬರ ಮೃತದೇಹ ಪತ್ತೆ; ಉಳಿದ ನಾಲ್ವರಿಗೆ ಮುಂದುವರಿದ ಶೋಧ ಕಾರ್ಯ

ಉಳಿದ ನಾಲ್ವರಿಗೆ ಮುಂದುವರಿದ ಶೋಧ ಕಾರ್ಯ
Last Updated 1 ಡಿಸೆಂಬರ್ 2020, 10:55 IST
ಅಕ್ಷರ ಗಾತ್ರ

ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳಸಮುದ್ರದಲ್ಲಿ ಮಗುಚಿಬಿದ್ದಿದ್ದು ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೇಲಕ್ಕೆತ್ತಿದ್ದಾರೆ.

ಮೃತರನ್ನು ಬೊಕ್ಕಪಟ್ನ ನಿವಾಸಿಗಳಾದ ಪಾಂಡುರಂಗ ಸುವರ್ಣ ಹಾಗೂ ಪ್ರೀತಂ (58) ಎಂದು ಗುರುತಿಸಲಾಗಿದೆ. ಝಿಯಾವುಲ್ಲ(32), ಅನ್ಸಾರ್ (31), ಹಸೈನಾರ್ (25), ಚಿಂತನ್ (21) ಇನ್ನೂ ಪತ್ತೆಯಾಗಿಲ್ಲ.

ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್‌ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಸ್‌ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ. 14 ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತ ದೇಹ ಲಭಿಸಿದೆ. ಇನ್ನುಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಲಿದೆ.

ಮೀನಿನ ಸಂಗ್ರಹ ಅಧಿಕವಾಗಿದ್ದರಿಂದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT