ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ‘ಬಾಂಬ್ ಸೂಟ್’ ಖರೀದಿಸಿ ಏರ್‌ಪೋರ್ಟ್ ಸೆಕ್ಯುರಿಟಿ ಗ್ರೂಪ್‌ಗೆ (ಎಎಸ್‌ಜಿ) ಹಸ್ತಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.
ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕ ವಸ್ತು ಸೇರಿದಂತೆ ಎದುರಾಗುವ ಯಾವುದೇ ಬೆದರಿಕೆಯನ್ನು ಎದುರಿಸಲು ಬಾಂಬ್ ಸೂಟ್ ಸಹಾಯಕವಾಗುತ್ತದೆ. ತರಬೇತಿ ಪಡೆದ ಎಎಸ್‌ಜಿ ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ತುಂಬುವುದರ ಜೊತೆಗೆ ಈ ಕ್ರಮವು ಪ್ರಯಾಣಿಕರಲ್ಲೂ ಭದ್ರತೆಯ ಭಾವನೆ ಮೂಡಿಸುತ್ತದೆ. ವಿಮಾನ ನಿಲ್ದಾಣದಲ್ಲೇ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ಸಾಧನಗಳು ಲಭ್ಯವಿದ್ದರೆ ತುರ್ತು ಸಂದರ್ಭದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಅಪಾಯವನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂದು ವಿಮಾನ ನಿಲ್ದಾಣದ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.