ಬೆಳ್ತಂಗಡಿ: ತಾಲ್ಲೂಕಿನ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 558ನೇ ಸೇವಾ ಯೋಜನೆ ಅಂಗವಾಗಿ ಇಲ್ಲಿನ ಕಾಪಿನಡ್ಕ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಭಾನುವಾರ ಉಚಿತ ಪುಸ್ತಕ ಮತ್ತು ಬ್ಯಾಗ್ ವಿತರಣೆ ಮಾಡಲಾಯಿತು.

ಬಳಂಜ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಮನೋಹರ್ ಬಳಂಜ ಮಾತನಾಡಿ, ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಊರಿನ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳದ್ದು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಸರ್ಕಾರದ ಅನೇಕ ಸೌಲಭ್ಯಗಳು ಸಿಗುತ್ತಿವೆ. ಹಾಗಾಗಿ ಸರ್ಕಾರಿ ಶಾಲೆಗಳ ಜತೆ ಸಂಘ ಸಂಸ್ಥೆಗಳು ಕೈಜೋಡಿಸಬೇಕು. ರಾಜಕೇಸರಿ ಸಂಘಟನೆ ನೊಂದವರಿಗೆ ನೆರವು, ಸರ್ಕಾರಿ ಶಾಲೆಯ ಅಭಿವೃದ್ಧಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಇತರ ಸಮಾಜಮುಖಿ ಕಾರ್ಯ ಮಾಡುತ್ತಿದ್ದು ಇದು ನೈಜ ಸಮಾಜಸೇವೆಯಾಗಿದೆ' ಎಂದರು

ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಸಂಚಾಲಕ ಜಗದೀಶ್ ಲಾಯಿಲ, ಸಹ ಸಂಚಾಲಕ ಶರತ್ ಕರಾಯ, ಸಾಮಾಜಿಕ ಜಾಲತಾಣದ ಸಂಪತ್, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಕ್ರೀಡಾ ಕಾರ್ಯದರ್ಶಿ ವಿನೋದ್ ಲಾಯಿಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಕಾಪಿನಡ್ಕ ಗೆಳೆಯರ ಬಳಗದ ಕಾರ್ಯದರ್ಶಿ ಯತೀಶ್, ಶಿಕ್ಷಕಿ ಅನಿತಾ, ಮಕ್ಕಳ ಪೋಷಕರು ಹಾಜರಿದ್ದರು.

ಶಿಕ್ಷಕಿ ಶಾಂತಿವಾಸ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಅನುಷಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.