ಬುಧವಾರ, ಜೂನ್ 29, 2022
27 °C

‘ಬೇರೆಯೇ ಮಾತು’ ಬಿಡುಗಡೆ 20ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರಂಗಚಾವಡಿ ಸಾಹಿತ್ಯಿಕ - ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಮೇ 20ರಂದು ಬೆಳಿಗ್ಗೆ 10.30ಕ್ಕೆ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಬರಹಗಳ ಸಂಕಲನ ‘ಬೇರೆಯೇ ಮಾತು’ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡುವರು. ಪುಸ್ತಕದ ಸಂಪಾದಕ ದಿನೇಶ್ ಅಮೀನ್‌ಮಟ್ಟು ಪುಸ್ತಕದ ಬಗ್ಗೆ ಮಾತನಾಡುವರು. ಪತ್ರಕರ್ತ ಅಬ್ದುಸ್ಸಲಾಮ್ ಪುತ್ತಿಗೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು