ಕಡಬ (ಉಪ್ಪಿನಂಗಡಿ): ಡಾ.ಶಿವರಾಮ ಕಾರಂತ ನಿಸರ್ಗ ಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿದ್ದ ಸೂರ್ಯಪ್ರಕಾಶ್ ಶೆಣೈ (58) ಕೆಲ ದಿನಗಳ ಅನಾರೋಗ್ಯದಿಂದ ಭಾನುವಾರ ಕಡಬದ ಹೊಸ್ಮಠದಲ್ಲಿರುವ ಅವರ ಮನೆಯಲ್ಲಿ ನಿಧನರಾದರು.

ಪಿಲಿಕುಳದ 85 ಎಕರೆಯಲ್ಲಿ ರಚಿಸಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವ ವೈವಿಧ್ಯ ರಕ್ಷಣೆಗೆ ಕೊಡುಗೆ ನೀಡಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಆನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂಎಸ್ಸಿ (1988-90) ಬ್ಯಾಚ್ನ ವಿದ್ಯಾರ್ಥಿಯಾಗಿದ್ದ ಅವರು, ಅದೇ ವಿಭಾಗದಿಂದ ಎಂ.ಫಿಲ್., ಪಿಎಚ್.ಡಿ ಗಳಿಸಿದ್ದರು. ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಶೋಧನೆಗಳ ಮೂಲಕ ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದ್ದರು.

2000ದಲ್ಲಿ ಐಎನ್ಇಪಿ ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪವನೆಗೆ ಅವರು ಶ್ರಮಿಸಿದ್ದರು. ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ತರಬೇತಿ ಶಿಬಿರ, ಕಾರ್ಯಾಗಾರಗಳನ್ನು ನಡೆಸಿಕೊಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.