ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು

Published 15 ಜನವರಿ 2024, 15:50 IST
Last Updated 15 ಜನವರಿ 2024, 15:50 IST
ಅಕ್ಷರ ಗಾತ್ರ

ಬೆಳ್ತಂಗಡಿ: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಬಾಲಕ ಮೃತಪಟ್ಟ ಘಟನೆ ಇಲ್ಲಿನ ಸೋಣಂದೂರು ಗ್ರಾಮದ ಪಣಕಜೆ ಬಳಿ ಸೋಮವಾರ ಸಂಜೆ ನಡೆದಿದೆ.

ಪಣಕಜೆ ನಿವಾಸಿ ಮಹಮ್ಮದ್ ಹನೀಫ್ ಎಂಬುವರ ಪುತ್ರ, ಸ್ಥಳೀಯ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅನಾನ್ (7) ಮೃತಪಟ್ಟ ಬಾಲಕ.

ಕಟ್ಟೆ ಇಲ್ಲದ ಬಾವಿಯ ಬಳಿ ಪಕ್ಕದ ಮನೆಯ ಮಕ್ಕಳ ಜತೆ ಆಟವಾಡುತ್ತಿದ್ದಾಗ ಅವಘಡ ನಡೆದಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ.

ಪುಂಜಾಲಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT