ಬುಧವಾರ, ಆಗಸ್ಟ್ 17, 2022
25 °C

ಬಿಟ್ ಕಾಯಿನ್‌ಗೆ ಬೇಡಿಕೆಯಿಟ್ಟಿದ್ದ ಉಜಿರೆ ಬಾಲಕನ ಅಪಹರಣಕಾರರು ಕೋಲಾರದಲ್ಲಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಅಪಹರಣಕ್ಕೆ ಒಳಗಾಗಿದ್ದ ಉಜಿರೆಯ 8 ವರ್ಷದ ಬಾಲಕನನ್ನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೂರ್ನಹೊಸಳ್ಳಿಯಲ್ಲಿ ಪತ್ತೆ ಮಾಡಲಾಗಿದೆ.

ಅಪಹರಣಕಾರರು ಮಂಜುನಾಥ ಎಂಬುವವರ ಮನೆಯಲ್ಲಿ ಬಾಲಕನನ್ನು ಇರಿಸಿದ್ದರು. ಕೋಲಾರ ಜಿಲ್ಲಾ ಪೊಲೀಸರ ನೆರವಿನೊಂದಿಗೆ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. 

ಎಲೆಕ್ಟ್ರಾನಿಕ್ ಸಿಟಿ ಕೋಮಲ್ ಮಂಡ್ಯದ ಗಂಗಾಧರ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಕೋಲಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ರ ಹೊತ್ತಿಗೆ ಪತ್ತೆ ಹಚ್ಚಿದರು. ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಬೆಳಿಗ್ಗೆ 11 ಕ್ಕೆ‌ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್‌ಸ್ಪೆಕ್ಟರ್ ನಂದಕುಮಾರ್, ಧರ್ಮಸ್ಥಳ ಠಾಣೆ ಸಬ್ ಇನ್‌ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ...

ಬಾಲಕನ ಅಪಹರಣ: ₹10 ಕೋಟಿಗೆ ಬೇಡಿಕೆ; ಉಜಿರೆಗೆ ಎಸ್‌ಪಿ ಭೇಟಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು