ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರದಿದ್ದರೆ ದೇಶಕ್ಕೆ ಗಂಡಾಂತರ: ಇಬ್ರಾಹಿಂ

Last Updated 14 ಏಪ್ರಿಲ್ 2022, 15:50 IST
ಅಕ್ಷರ ಗಾತ್ರ

ಮಂಗಳೂರು: ‘ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರದಿದ್ದರೆ ಭಾರತಕ್ಕೆ ಗಂಡಾಂತರ ತಪ್ಪಿದ್ದಲ್ಲ. ಅಂಬೇಡ್ಕರ್ ಅವರ ಸಿದ್ಧಾಂತ, ಆಶಯ ಮತ್ತು ಸಂವಿಧಾನದ ಹಕ್ಕುಗಳಿಗೆ ಬಿಜೆಪಿ ಸರ್ಕಾರ ತಿಲಾಂಜಲಿ ನೀಡುತ್ತ ಬರುತ್ತಿರುವುದು ವಿಷಾದನೀಯ’ ಎಂದು ಕಾಂಗ್ರೆಸ್ ಮುಖಂಡ ಇಬ್ರಾಹಿಂ ಕೋಡಿಜಾಲ್ ಕಳವಳ ವ್ಯಕ್ತಪಡಿಸಿದರು.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಜ ಭಾರತೀಯನಾಗಿದ್ದ ಅಂಬೇಡ್ಕರ್ ಭ್ರಷ್ಟಾಚಾರ, ವರ್ಗೀಯತೆ, ಜಾತೀಯತೆಗೆ ವಿರುದ್ಧವಾಗಿದ್ದರು. ಎಲ್ಲ ವರ್ಗಗಳಿಗೆ ಧಾರ್ಮಿಕ ಹಕ್ಕು ಮತ್ತು ಧ್ವನಿಯನ್ನು ನೀಡಿದ ಮಹಾನುಭಾವ. ಈ ದೇಶದ ತತ್ವ–ಸಿದ್ಧಾಂತವನ್ನು ಜನರಿಗೆ ಮುಟ್ಟಿಸಿದ ಧೀಮಂತ ನಾಯಕ ಎಂದರು.

ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಮತಾ ಗಟ್ಟಿ, ಕೃಪಾ ಆಳ್ವ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮುಖಂಡರಾದ ಪದ್ಮನಾಭ ನರಿಂಗಾನ, ನವೀನ್ ಡಿಸೋಜ, ಲಾರೆನ್ಸ್ ಡಿಸೋಜ, ಸುಭಾಷ್ ಚಂದ್ರ ಕೊಲ್ನಾಡ್, ಅಪ್ಪಿ, ಮಲ್ಲಿಕಾ ಪಕ್ಕಳ, ಶಾಂತಲಾ ಗಟ್ಟಿ, ಸಬಿತಾ ಮಿಸ್ಕಿತ್, ಶಬ್ಬೀರ್ ಎಸ್, ಸಿ.ಎಂ.ಮುಸ್ತಫಾ, ಟಿ.ಕೆ.ಸುಧೀರ್, ರಮಾನಂದ ಪೂಜಾರಿ, ಇಸ್ಮಾಯಿಲ್ ಬಿ.ಎಸ್, ಮಲ್ಲಿಕಾರ್ಜುನ್ ಕೋಡಿಕಲ್, ಸುರೇಶ್ ಪೂಜಾರಿ, ವಸಂತಿ ಅಂಚನ್, ಎಸ್.ಕೆ. ಸೌಹಾನ್, ಫಯಾಝ್ ಅಮ್ಮಮ್ಮಾರ್, ಮುಹೈಮಿನ್ ಇದ್ದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಶುಭೋದಯ ಆಳ್ವ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT