ಗುರುವಾರ , ಸೆಪ್ಟೆಂಬರ್ 23, 2021
22 °C

ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕಾಂಗ್ರೆಸ್‌ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವ ವ್ಯಕ್ತಿಯ ವಿರುದ್ಧ ಬಿರುವೆರ್‌ ಕುಡ್ಲ ಸಂಘಟನೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

‘ಜನಾರ್ದನ ಪೂಜಾರಿ ಅವರು ತಾವಿರುವ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ, ಬಿಜೆಪಿ ಪರ ಬ್ಯಾಟಿಂಗ್‌ ಮಾಡುವ ವ್ಯಕ್ತಿ. ಈತನನ್ನು ಇಲ್ಲಿಯವರೆಗೆ ಹೈಕಮಾಂಡ್‌ ಕೂಡ ವಿರೋಧಿಸಿಲ್ಲ. ಒಂದು ವೇಳೆ ಈ ರೀತಿಯಾಗಿ ಅಲ್ಪಸಂಖ್ಯಾತ ವ್ಯಕ್ತಿ ಮಾತನಾಡಿದ್ದರೆ ಆ ವ್ಯಕ್ತಿಯನ್ನು ಕೂಡಲೇ ಕಾಂಗ್ರೆಸ್‌ ವಜಾ ಮಾಡುತ್ತಿತ್ತು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎನ್ನುವ ಸಿದ್ಧಾಂತವನ್ನು ನಿಲ್ಲಿಸಿ ಎಂದು ರಶೀದ್‌ ಟಿಪ್ಪು ಹೆಸರಿನ ಫೇಸ್‌‌ಬುಕ್‌ ಖಾತೆಯಲ್ಲಿ ಬರೆಯಲಾಗಿದೆ. ಜನಾರ್ದನ ಪೂಜಾರಿ ಅವರ ಚಿತ್ರವನ್ನು ಅಪ್‌ಲೋಡ್ ಮಾಡಿ ಅವಹೇಳನಕಾರಿಯಾಗಿ ಬರೆದು ಪೋಸ್ಟ್‌ ಮಾಡಲಾಗಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು