ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈವಸ್ಥಾನ, ದೇವಾಲಯಗಳಿಗೆ ಬೃಜೇಶ್ ಚೌಟ ಭೇಟಿ

ಶಾಸಕರು, ಕಾರ್ಯಕರ್ತರ ಜೊತೆ ಚರ್ಚೆ; ಪುತ್ತೂರಿನಲ್ಲಿ ಅದ್ಧೂರಿ ಸ್ವಾಗತ ಕೋರಿ ಸನ್ಮಾನ
Published 14 ಮಾರ್ಚ್ 2024, 14:24 IST
Last Updated 14 ಮಾರ್ಚ್ 2024, 14:24 IST
ಅಕ್ಷರ ಗಾತ್ರ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಣೆಯಾದ ಬೆನ್ನಲ್ಲೇ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ದೇವಸ್ಥಾನ, ದೈವಸ್ಥಾನಗಳಿಗೆ ಭೇಟಿ ನೀಡಿದರು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ ಅವರು ಪ್ರಾರ್ಥನೆ ಸಲ್ಲಿಸಿದರು.

ತಾವು ಪ್ರತಿನಿಧಿಸುವ ರಥಬೀದಿ ಮತಗಟ್ಟೆ ವ್ಯಾಪ್ತಿಯ ಪಕ್ಷದ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಅವರು ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯವನ್ನೂ ಮಾಡಿದ್ದಾರೆ. ಮಾರ್ಗದರ್ಶಕರಾದ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ ಹೆಗ್ಡೆ ಅವರನ್ನು ಭೇಟಿಯಾದ ಅವರು ಆಶೀರ್ವಾದ ಪಡೆದರು.

ಮಂಗಳೂರಿನಲ್ಲಿ ಚುರುಕಿನ ಸಂಚಾರ ಮಾಡಿದ ಚೌಟ ಅವರು ಮುಖಂಡರಾದ ಕೃಷ್ಣ ಪಾಲೆಮಾರ್ ಮತ್ತು ಯೋಗೀಶ್ ಭಟ್, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಮನೆಗೆ ಭೇಟಿ ನೀಡಿದ ಅವರು ಲೋಕಸಭೆ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದರು. ಸಂಜೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಮನೆಗೂ ತೆರಳಿದರು.

ಪುತ್ತೂರಿಗೆ ತೆರಳಿದ ಅವರನ್ನು ಭಾರಿ ಸಂಖ್ಯೆಯಲ್ಲಿ ಸೇರಿದ ಪಕ್ಷದ ಕಾರ್ಯಕರ್ತರು ಸ್ವಾಗತಿಸಿದರು. ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು. ಪುತ್ತೂರು ಸೈನಿಕರ ಭವನಕ್ಕೆ ತೆರಳಿದ ಚೌಟರು ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.

ಪುತ್ತೂರಿನಲ್ಲಿ ಬೃಜೇಶ್ ಚೌಟ ಅವರಿಗೆ ಅದ್ಧೂರಿ ಸ್ವಾಗತ ಕೋರಿದ ಕಾರ್ಯಕರ್ತರು
ಪುತ್ತೂರಿನಲ್ಲಿ ಬೃಜೇಶ್ ಚೌಟ ಅವರಿಗೆ ಅದ್ಧೂರಿ ಸ್ವಾಗತ ಕೋರಿದ ಕಾರ್ಯಕರ್ತರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT