ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಳಿನ್‌ ಕುಮಾರ್‌ ಕಟೀಲ್‌ ಸಹೋದರ ನವೀನ್‌ ಕುಮಾರ್ ರೈ ಕುಂಜಾಡಿ ನಿಧನ

Last Updated 28 ಜೂನ್ 2021, 14:22 IST
ಅಕ್ಷರ ಗಾತ್ರ

ಪುತ್ತೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರ ಸಹೋದರ ನವೀನ್ ಕುಮಾರ್ ರೈ ಕುಂಜಾಡಿ (57) ಅನಾರೋಗ್ಯದಿಂದಾಗಿ ಸೋಮವಾರ ನಿಧನರಾದರು.

ಅವರಿಗೆ ತಾಯಿ ಸುಶೀಲಾವತಿ ರೈ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ಹಾಗೂ ಸಹೋದರಿ ಇದ್ದಾರೆ.

ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ನಿಧನರಾದರು.

ಕೃಷಿಕರಾಗಿದ್ದ ನವೀನ್ ಕುಮಾರ್ ಅವರು ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಯೋಧ್ಯಾ ಕರೆಸೇವೆಯಲ್ಲಿ ಅವರು ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT