ಮಂಗಳೂರು: ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಅದಾನಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದರು.

ಶಿರಾ, ರಾಜರಾಜೇಶ್ವರಿ ಹಾಗೂ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಆ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ದೆಹಲಿಯಿಂದ ಅವರ ಬದಲಾವಣೆ ಮಾಡುತ್ತಾರೆಯೇ? ಎಂದು ಪ್ರಶ್ನಿಸಿದರು.

ಮಂಗಳೂರಿನಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ಯಡಿಯೂರಪ್ಪ ಅವರು ನಗರಕ್ಕೆ ಬಂದಿದ್ದು, ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಇದ್ದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಪಕ್ಷದ ಪ್ರಮುಖರು ಅವರನ್ನು ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.