ಶನಿವಾರ, ಮಾರ್ಚ್ 28, 2020
19 °C

ಕಡಬ: ಬಸ್ ಚಾಲಕ ನಿಧನ, ಹೆಚ್1ಎನ್1 ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಡಬ(ಉಪ್ಪಿನಂಗಡಿ): ಮಂಗಳೂರಿನಲ್ಲಿ ಖಾಸಗಿ ಬಸ್‌ನಲ್ಲಿ ಚಾಲಕರಾಗಿದ್ದ 102-ನೆಕ್ಕಿಲಾಡಿ ಗ್ರಾಮದ ಕಲ್ಪುರೆ ನಿವಾಸಿ ಕುಶಾಲಪ್ಪ ಗೌಡ(50) ಎಂಬುವರು ಮಂಗಳವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಚ್1ಎನ್1 ಜ್ವರದಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

20 ದಿನದಿಂದ ಜ್ವರದಿಂದ ಬಳಲುತ್ತಿದ್ದ ಅವರು ಆರಂಭದಲ್ಲಿ ಕಡಬ ಹಾಗೂ ಕಾಣಿಯೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಕಡಿಮೆಯಾಗದ ಕಾರಣ ಅವರನ್ನು ವಾರದ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆತಂಕ ಬೇಡ-ಡಿಎಚ್ಒ: ‘ಕುಶಾಲಪ್ಪ ಗೌಡ ಅವರು ವೈರಲ್ ನ್ಯುಮೋನಿಯಾದಿಂದ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿ ಬಂದಿದೆ. ಇವರು ಎಚ್1ಎನ್1ನಿಂದಲೇ ಮೃತಪಟ್ಟಿದ್ದಾರೆ ಎಂದು ಖಚಿತವಾಗಿಲ್ಲ. ವೈರಲ್ ನ್ಯುಮೋನಿಯಾದಲ್ಲಿಯೂ ಎಚ್1ಎನ್1 ಜ್ವರದ ರೀತಿಯ ಗುಣಲಕ್ಷಣಗಳು ಇರುವುದರಿಂದಾಗಿ ಗೊಂದಲ ಉಂಟಾಗಿದೆ. ಪರಿಸರದಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಯಾರೂ ಈ ಬಗ್ಗೆ ಆತಂಕ ಪಡಬೇಕಾಗಿಲ್ಲ’ ಎಂದು ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ಡಾ. ಸಿಕಂದರ್ ಪಾಷಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು