ಮಂಗಳೂರು: ಮಂಗಳೂರು- ಕಾಸರಗೋಡು ನಡುವೆ ಖಾಸಗಿ ಮತ್ತು ಸರ್ಕಾರಿ ಬಸ್ಗಳ ಸಂಚಾರ ಜುಲೈ 19ರಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಅನ್ಲಾಕ್ ಪ್ರಕ್ರಿಯೆ ಈಗಲೂ ಜಾರಿಯಲ್ಲಿದೆ. ಕೋವಿಡ್ ನಿಯಂತ್ರಿಸಲು ಜಾಗ್ರತೆ ವಹಿಸುವ ಅನಿವಾರ್ಯತೆಯೂ ಇದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಮೂರನೇ ಕೋವಿಡ್ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಕೇರಳದ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವಹಿವಾಟು ಸೇರಿದಂತೆ ಇತರ ಕಾರಣಗಳಿಗೆ ದೈನಂದಿನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯ ಕನಿಷ್ಠ 1 ಡೋಸ್ ಪಡೆದಿರುವ ಅಥವಾ 72ಗಂಟೆಗಳ ಒಳಗೆ ಮಾಡಿಸಿರುವ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ನ ನಿರ್ವಾಹಕರು ಖಚಿತಪಡಿಸಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು (ಮುಖಗವಸು, ಸ್ಯಾನಿಟೈಸರ್ ಬಳಕೆ, ಸುರಕ್ಷಿತ ಅಂತರ) ಕಡ್ಡಾಯವಾಗಿ ಪಾಲಿಸಬೇಕು. ಈ ಕ್ರಮಗಳನ್ನು ಉಲ್ಲಂಘಿಸುವವರಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.