ಮಂಗಳವಾರ, ಜೂನ್ 22, 2021
23 °C

ಮಂಗಳೂರು: ಹಿಂದೂ ದೇವರ ನಿಂದನೆ; ಉದ್ಯಮಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ. 

ಆರೋಪಿ  ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

ಇದನ್ನೂ ಓದಿ: 

ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ ಬಂಧಿತ.  ಫರ್ನಿಚರ್ ಅಂಗಡಿ ಸಹಿತ ವಿವಿಧ  ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್ ಇಕ್ಬಾಲ್, ಚಾಮುಂಡೇಶ್ವರಿ ದೇವಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೊ ಮೂರು ದಿನಗಳಿಂದ ವೈರಲ್ ಆಗಿತ್ತು. 

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ,  ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟಕರು ದೂರು ದಾಖಲಿಸಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿದ್ದು, ಇಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು