ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್.ಐ.ಟಿ) ನಡೆಸುತ್ತಿರುವ ತನಿಖೆಯ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕೆಲವು ದಿನಗಳಿಂದ ಸಮೂಹ ಮಾಧ್ಯಮಗಳಲ್ಲಿ ಅಪಪ್ರಚಾರ ನಡೆಯುತ್ತಿದೆ. ಇದಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿ.ಜೆ.ಪಿ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.

ಧರ್ಮಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

'ಧರ್ಮಸ್ಥಳ ಕ್ಷೇತ್ರ, ಇಲ್ಲಿನ ಅಣ್ಣಪ್ಪಸ್ವಾಮಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಸಮೂಹ ಮಾಧ್ಯಮಗಳಲ್ಲಿ ಆಧಾರರಹಿತ ಆರೋಪ ಮಾಡಲಾಗುತ್ತಿದೆ. ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದೆ. ಇದರಿಂದ ಅಸಂಖ್ಯಾತ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲ ಮೂಡಿದೆ' ಎಂದರು.

'ಎಸ್.ಐ.ಟಿ. ತನಿಖೆಯನ್ನು ಬಿ.ಜೆ.ಪಿ. ಸ್ವಾಗತಿಸುತ್ತದೆ. ಆದರೆ, ತನಿಖೆ ಪಾರದರ್ಶಕವಾಗಿ ನಡೆಯಬೇಕು' ಎಂದು ಅವರು ಸಲಹೆ ನೀಡಿದರು. 'ಕ್ಷೇತ್ರದ ಕುರಿತು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೇಳಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಮಾಹಿತಿಯನ್ನು ಅವರು ಬಹಿರಂಗಪಡಿಸಿಲ್ಲ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಕುರಿತೂ ತನಿಖೆಯಾಗಬೇಕು.ಸಾಕ್ಷಿ ದೂರುದಾರನ ಹಿನ್ನೆಲೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವವರ ಕುರಿತೂ ತನಿಖೆಯಾಗಲಿ' ಎಂದು ಅವರು ಒತ್ತಾಯಿಸಿದರು.

'ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಕಪೋಲಕಲ್ಪಿತ. 17 ಕಡೆಗಳಲ್ಲಿ ಹೊಂಡ ತೋಡಿದರೂ ಸಾಕ್ಷಿ, ಪುರಾವೆ ಏನೂ ಸಿಗಲಿಲ್ಲ. ಪ್ರಕರಣದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇರುವುದು, ಅಪಪ್ರಚಾರ ಹಾಗೂ ಶ್ರದ್ಧಾ ಭಂಗದ ಹುನ್ನಾರವೂ ನಡೆದಿದೆ' ಎಂದು ಅವರು ಆರೋಪಿಸಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಉಳಿಪಾಡಿ, ಉಮಾನಾಥ ಕೋಟ್ಯಾನ್, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೋಳಿ, ಕಿರಣ್ ಕೊಡ್ಗಿ, ಎಸ್.ಆರ್. ವಿಶ್ವನಾಥ್, , ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರತಾಪಸಿಂಹ ನಾಯಕ್, ರವಿಕುಮಾರ್ ದಕ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ನಂದನ ಮಲ್ಯ ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬಳಿಕ ಬಿ.ವೈ ವಿಜಯೇಂದ್ರ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.