ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೋಲಿನಿಂದಾಗಿ ಪೆಟ್ರೋಲ್ ಬೆಲೆ ಇಳಿಕೆ- ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್

ವಿಟ್ಲ: ಬ್ಲಾಕ್ ಕಾಂಗ್ರೆಸ್ ಪದಗ್ರಹಣ
Last Updated 9 ನವೆಂಬರ್ 2021, 15:57 IST
ಅಕ್ಷರ ಗಾತ್ರ

ವಿಟ್ಲ: ದೇಶದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಸರಣಿ ಕಾಣುತ್ತಿದ್ದಂತೆ ಪೆಟ್ರೋಲ್, ಡೀಸಲ್ ದರ ಇಳಿಕೆಯಾಗಿದೆ. ಕಾಂಗ್ರೆಸ್ ಪಕ್ಷ ಬಲಿಷ್ಠವಾದಷ್ಟು ಬಡವರ ಬದುಕು ಸುಭದ್ರವಾಗುತ್ತದೆ ಎಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಟ್ಲದಲ್ಲಿ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಹಾಗೂ ಕೈಗಾರಿಕೆಗೆ ಸಮಾನ ಅವಕಾಶವನ್ನು ಕಲ್ಪಿಸುವ ಜತೆಗೆ ಬಡವರಿಗೂ ಆರ್ಥಿಕ ಶಕ್ತಿಯನ್ನು ನೀಡುವ ಕಾರ್ಯವನ್ನು ಕಾಂಗ್ರೆಸ್ ಮಾಡಿದೆ. ದೇಶಕ್ಕೆ ಸುಭದ್ರ ಬುನಾದಿಯನ್ನು ಕಾಂಗ್ರೆಸ್ ಪಕ್ಷ ಹಾಕಿಕೊಟ್ಟಿದೆ. ಕಾಂಗ್ರೆಸ್ ಏನು ಮಾಡಿದೆ ಎನ್ನುವವರಿಂದ ದೇಶದ ಆಸ್ತಿಗಳನ್ನು ಮಾರುವ ಕಾರ್ಯವಾಗುತ್ತಿದೆ ಎಂದು ಟೀಕಿಸಿದರು.

ಹಿರಿಯ ಕಾರ್ಯಕರ್ತ ಪುಣಚ ರಾಘವ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಾಯಿತು. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ. ಬಿ. ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ಡಿ. ಸಿ. ಸಿ. ಕಾರ್ಯದರ್ಶಿಗಳಾದ ಮುರಳೀಧರ ರೈ ಮಡಂದಬೆಟ್ಟು, ಪ್ರವೀಣ್ ಚಂದ್ರ ಆಳ್ವ, ಉಮಾನಾಥ ಶೆಟ್ಟಿ, ಬ್ಲಾಕ್ ಕಾಂಗ್ರಸ್ ವಕ್ತಾರ ರಮಾನಾಥ ವಿಟ್ಲ, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ರಹಿಮಾನ್ ಯುನಿಕ್, ಜಗನ್ನಾಥ ಶೆಟ್ಟಿ ಕೋಡಿಂಬಾಡಿ, ಉಪಾಧ್ಯಕ್ಷ ಅಶ್ರಫ್ ಬಸ್ತಿಕಾರ್, ವಿಟ್ಲ ನಗರ ಸಮಿತಿ ಅಧ್ಯಕ್ಷ ವಿ. ಕೆ. ಎಂ. ಅಶ್ರಫ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT