ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಹ ಮುಕ್ತ ಕರ್ನಾಟಕ: ನಗರಾಭಿವೃದ್ಧಿ ಸಚಿವ ಬೈರತಿ ಬಸರಾಜ್ ಭೇಟಿ

Last Updated 21 ನವೆಂಬರ್ 2022, 6:02 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ದಾಹಮುಕ್ತ ಕರ್ನಾಟಕದ ಸಂಕಲ್ಪವನ್ನು ಸರ್ಕಾರ ಹೊಂದಿದ್ದು, ಸುಮಾರು ₹9 ಸಾವಿರ ಕೋಟಿ ಅನುದಾನ ಇರಿಸಿದೆ. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಭಾನುವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಧರ್ಮಸ್ಥಳಕ್ಕೆ ಕುಡಿಯುವ ನೀರಿನ ಯೋಜನೆಗೆ₹25 ಕೋಟಿ ಅನುದಾನ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೂ ಒಳಚರಂಡಿ ವ್ಯವಸ್ಥೆ ಬೇಕು ಎಂದು ಸಚಿವ ಎಸ್.ಅಂಗಾರ ಕೇಳಿಕೊಂಡಿದ್ದಾರೆ. ಮುಂದಿನ ಒಂದೂವರೆ ತಿಂಗಳೊಳಗೆ ಕುಕ್ಕೆಗೆ ಬೇಕಾಗಿರುವ ಒಳಚರಂಡಿ ವ್ಯವಸ್ಥೆಗೆ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸದಸ್ಯರಾದ ಪ್ರಸನ್ನ ದರ್ಬೆ, ಲೋಕೇಶ್, ಪಿ.ಜಿ.ಎಸ್.ಎನ್.ಪ್ರಸಾದ್, ಶೋಭಾ ಗಿರಿಧರ್, ವನಜಾ ಭಟ್, ಮನೋಜ್, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ದೇವಳದ ಶಿಷ್ಟಾಚಾರ ವಿಭಾಗದ ಜಯರಾಮ ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT