ಭಾನುವಾರ, ಆಗಸ್ಟ್ 1, 2021
26 °C

ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕರಾಗಿ ಕೃಷ್ಣಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕ್ಯಾಂಪ್ಕೊದ ವ್ಯವಸ್ಥಾಪಕ ನಿರ್ದೇಶಕರಾಗಿ ಎಚ್.ಎಂ. ಕೃಷ್ಣಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಕೃಷ್ಣ ಕುಮಾರ್ ಅವರನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ಆಹಾರ ತಂತ್ರಜ್ಞಾನ ಪರಿಣಿತರಾಗಿರುವ ಕೃಷ್ಣ ಕುಮಾರ್, ಮಂಗಳೂರು ವಿಶ್ವವಿದ್ಯಾಲಯದಿಂದ ರ‍್ಯಾಂಕ್‌ನೊಂದಿಗೆ ಬಿಎಸ್ಸಿ ಮತ್ತು ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದಾರೆ.

ಕೃಷ್ಣ ಕುಮಾರ್ ಅವರನ್ನು ಅಭಿನಂದಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್‌ ಕುಮಾರ್ ಕೊಡ್ಗಿ, ಸದಸ್ಯ ಬೆಳೆಗಾರರು ಸಂಸ್ಥೆಯ ವ್ಯವಹಾರಕ್ಕೆ ಸಂಬಂಧಪಟ್ಟ ಯಾವುದೇ ಮಾಹಿತಿಗಾಗಿ ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು