ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಂಪ್ಕೊ: ಆಮ್ಲಜನಕ ಘಟಕ

5 ಜಿಲ್ಲೆಗಳಲ್ಲಿ ₹1ಕೋಟಿ ವೆಚ್ಚದಲ್ಲಿ ನಿರ್ಮಾಣ
Last Updated 8 ಮೇ 2021, 5:06 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಕ್ಯಾಂಪ್ಕೊ ₹1 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಆಮ್ಲಜನಕವನ್ನು ಪೂರೈಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಂಡಿದೆ.

ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದಿಸುವ ಘಟಕ ಅಳವಡಿಸಲಿದೆ. ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಆಸ್ಪತ್ರೆಗಳಿಗೆ ಅಮ್ಲಜನಕದ ಜಂಬೋ ಸಿಲಿಂಡರ್‌ಗಳನ್ನು ಕ್ಯಾಂಪ್ಕೊ ಪೂರೈಸಲಿದೆ.

ಇದೀಗ ಕೋವಿಡ್ ಬಾಧಿಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉಸಿರಾಟದ ತೊಂದರೆ ಆಗದಂತೆ ಆಮ್ಲಜನಕವನ್ನು ಪೂರೈಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಸಂಸ್ಥೆಯು ಈಗಾಗಲೇ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಈ ಭಾಗದ ಶಾಸಕರು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ. ಕೃಷ್ಣ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT