ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಟ್ಟಾರ ಚೌಕಿ ವೃತ್ತಕ್ಕೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ

Published 26 ನವೆಂಬರ್ 2023, 12:43 IST
Last Updated 26 ನವೆಂಬರ್ 2023, 12:43 IST
ಅಕ್ಷರ ಗಾತ್ರ

ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ಪ್ರಾಣವನ್ನೇ ಬಲಿದಾನ ಮಾಡಿದ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ವೃತ್ತಕ್ಕೆ ಇಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ
ತಿಳಿಸಿದ್ದಾರೆ.

ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಜತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT