ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರ್ಮಾಡಿ ತಿರುವಿನಲ್ಲಿ ಕಾರು ಅಪಘಾತ: ಉಜಿರೆ ಗ್ರಾಪಂ ಅಧ್ಯಕ್ಷೆ ಸೇರಿ ಐವರಿಗೆ ಗಾಯ

Last Updated 10 ಏಪ್ರಿಲ್ 2023, 4:51 IST
ಅಕ್ಷರ ಗಾತ್ರ

ಬೆಳ್ತಂಗಡಿ (ದಕ್ಷಿಣ ಕನ್ನಡ): ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಭಾನುವಾರ ರಾತ್ರಿ ಕಾರೊಂದು ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಐವರು ಗಾಯಗೊಂಡಿದ್ದಾರೆ.

ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಅವರ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ ಹಾಗೂ ಸಂಬಂಧಿ ಸರೋಜಿನಿ ಶೆಟ್ಟಿ ಹಾಗೂ ಚಾಲಕ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕೊಪ್ಪದಲ್ಲಿ ನಿಧನರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT