ಉಳ್ಳಾಲ (ದಕ್ಷಿಣ ಕನ್ನಡ): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೇತ್ರಾವತಿ ನದಿ ಸೇತುವೆ ಸಮೀಪದ ಆಡಂಕುದ್ರುವಿನ ಬಳಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಮತ್ತೊಂದು ಕಾರು ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸೋಮವಾರ ಸ್ಥಳದಲ್ಲೇ ಅಸುನೀಗಿದರು.

ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಮೃತರು. ಆಡಂ ಕುದ್ರುವಿನಲ್ಲಿ ಅಂಗಡಿ ಹೊಂದಿದ್ದ ಬೇಬಿ, ಪಂಪ್ವೆಲ್ನಲ್ಲಿ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು.

‘ಬೇಬಿ ಅವರು ಸೋಮವಾರ ಸಂಜೆ ಕೆಲಸಕ್ಕೆ ತೆರಳಲು ರಸ್ತೆ ದಾಟುವಾಗ ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ವೇಗವಾಗಿ ಧಾವಿಸಿ ಬಂದ ಪೋಲೊ ಕಾರು ಢಿಕ್ಕಿ ಹೊಡೆದಿತ್ತು. ನಿಯಂತ್ರಣ ತಪ್ಪಿದ ಪೋಲೊ ಕಾರು ಹೆದ್ದಾರಿ ಅಂಚಿನ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಪೋಲೊ ಕಾರನ್ನು ಹಿಂದಿಕ್ಕುವ ಧಾವಂತದಲ್ಲಿದ್ದ ಕಿಯಾ ಕಾರು ಕೂಡ ರಸ್ತೆ ಬದಿಯ ಪೊದೆಗೆ ನುಗ್ಗಿದೆ. ಕಾರುಗಳ ಚಾಲಕರಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ರವಿಶಂಕರ್, ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.