ಗುರುವಾರ , ಜನವರಿ 21, 2021
18 °C

ಮಂಗಳೂರು: ನದಿಗೆ ಉರುಳಿದ ಕಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾವಂಜೆ ಸೇತುವೆ ಬಳಿಯ ಸಂಚರಿಸುತಿದ್ದ ಕಾರು, ಹಠಾತ್ತನೆ ನಂದಿನಿ ನದಿಗೆ ಬಿದ್ದಿದ್ದು, ಕಾರಿನಲ್ಲಿದ್ದವರು ಈಜಿ ದಡ ಸೇರಿದ್ದಾರೆ.

ಸುರತ್ಕಲ್‌ ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಅವರ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್‌ಕ್ಕೆ ತೆರಳಿ, ಅಲ್ಲಿಂದ ವಾಪಸ್ ಬರುವ ವೇಳೆ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ನಂದಿನಿ ನದಿಗೆ ಬಿದ್ದಿದೆ. ಕಾರು ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರಿನಿಂದ ಹೊರಬಂದು ಈಜಿ ದಡ ಸೇರಿದ್ದಾರೆ. ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುರತ್ಕಲ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು, ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.