ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರು ಡಿಕ್ಕಿ: 10ಕ್ಕೂ ಹೆಚ್ಚು ವಾಃನಗಳಿಗೆ ಹಾನಿ

Published 28 ಮೇ 2024, 5:36 IST
Last Updated 28 ಮೇ 2024, 5:36 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಲಾಗಿದ್ದ ಹಲವು ದ್ವಿಚಕ್ರ ವಾಹನಗಳು ಕಾರು ಡಿಕ್ಕಿ ಹೊಡೆದ ಪರಿಣಾಮ ಸೋಮವಾರ ಹಾನಿಗೊಳಗಾಗಿವೆ. 

ಉದ್ಯೋಗಕ್ಕೆ ತೆರಳುವ ಅನೇಕರು ಸಂಟ್ಯಾರ್ ಜಂಕ್ಷನ್‌ ಬಳಿ ವಾಹನ ನಿಲ್ಲಿಸಿ ಬಸ್‌ನಲ್ಲಿ ತೆರಳುತ್ತಾರೆ. ಪಾಣಾಜೆ ಕಡೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಸಂಟ್ಯಾರ್‌ ಮಾರ್ಗವಾಗಿ ಚಲಿಸುತ್ತಿತ್ತು. ಚಾಲಕ ಸಂಟ್ಯಾರ್ ಬಳಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರು. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನ ಮುಂಭಾಗವೂ ನಜ್ಜುಗುಜ್ಜಾಗಿದೆ. 

ಸಂಪ್ಯ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT